ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ರಾಜ್ಯ ಸರ್ಕಾರದ ನಿಲುವು ಖಂಡಿಸಿ, ಬಿಜೆಪಿ ನಾಳೆಯಿಂದ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ "ಧರ್ಮಯುದ್ಧ" ಹೋರಾಟವನ್ನು ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಘೋಷಿಸಿದ್ದಾರೆ.
ಶ್ರೀ ಕ್ಷೇತ್ರದ ಬಗ್ಗೆ ಇರುವ ನಂಬಿಕೆ, ಧರ್ಮಾಧಿಕಾರಿಗಳ ಮುಖೇನ ನಡೆಯುತ್ತಿರುವ ಸಮಾಜಮುಖಿ ಸೇವೆಗಳ ಬಗ್ಗೆ ವ್ಯವಸ್ಥಿತ ಅಪಪ್ರಚಾರ ನಡೆಸಿ ಜನರ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟುಮಾಡುತ್ತಿರುವ ಸಮಾಜ ಕಂಟಕರ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ.
ಪರಶುರಾಮ ಹಿತರಕ್ಷಣಾ ಸಮಿತಿಯೋ ಅಥವಾ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ರಕ್ಷಣಾ ವೇದಿಕೆಯೋ ಎಂದು ಬೈಲೂರಿನ ಪರಶುರಾಮ ಥೀಂ ಪಾರ್ಕ್ ಜನಜಾಗೃತಿ ಸಮಿತಿಯ ಸಚ್ಚಿದನಾಂದ ಶೆಟ್ಟಿ ಪ್ರಶ್ನಿಸಿದ್ದಾರೆ.
ಧರ್ಮಸ್ಥಳದಲ್ಲಿ ಅನಾಮಿಕ ದೂರಿನ ಮೇರೆಗೆ ಶವಗಳ ಶೋಧ ನಡೆಸುತ್ತಿದ್ದ ಎಸ್ಐಟಿ ತಂಡ ಕಾರ್ಯಾಚರಣೆ ಮುಗಿಸಿ ಹಿಂದಿರುಗಿದ ಬಳಿಕ, ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು.