ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆಯು ರಾಜ್ಯದಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದು, ಈ ಯೋಜನೆಯು ಇದುವರೆಗೆ 500 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿದೆ.
ಮಂಗಳೂರು ನಗರಕ್ಕೆ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 'ಪ್ರಧಾನಮಂತ್ರಿ ಇ-ಬಸ್ ಸೇವಾ' ಯೋಜನೆಯಡಿ 100 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.