ದೇಶದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದೇಶಕ್ಕಾಗಿ ಸಲ್ಲಿಸಿದ ಸೇವೆಗಳನ್ನು ಶ್ಲಾಘಿಸಿದರು.
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸದ ಮತ್ತು ಭಾರತದ್ದೇ ದೋಷವಿರುವಂತೆ ಬಿಂಬಿಸುವ ಶಾಂಘೈ ಸಹಕಾರ ಸಂಘಟನೆಯ (SCO) ಪ್ರಸ್ತಾವಪತ್ರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಹಿ ಹಾಕಲು ನಿರಾಕರಿಸಿ ಪಾಕಿಸ್ತಾನ ಮತ್ತು ಅದರ ಬೆಂಬಲಿಗ ರಾಷ್ಟ್ರಗಳಿಗೆ ಸ್ಪಷ್ಟವಾದ ರಾಜತಾಂತ್ರಿಕ ಸಂದೇಶವನ್ನು ರವಾನಿಸಿದ್ದಾರೆ.
ಭಾರತದ ತಾಳ್ಮೆಯನ್ನು ಪಾಕಿಸ್ತಾನ ಮತ್ತೆ ಪರೀಕ್ಷಿಸುವ ಪ್ರಯತ್ನ ಮಾಡಿದರೆ, ಇದು ದೇಶದಿಂದ 'ಗುಣಮಟ್ಟದ ಪ್ರತಿಕ್ರಿಯೆ'ಗೆ ದಾರಿ ಮಾಡಿಕೊಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.