"ನಿಮ್ಮ ಊರಿಗೆ ರಸ್ತೆ ಬೇಕಿದ್ದರೆ, ಗ್ಯಾರಂಟಿ ಯೋಜನೆಗಳು ಬೇಡ ಎಂದು ಸಹಿ ಹಾಕಿ" - ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ
“ನಮ್ಮ ಬಳಿ ಹಣವಿಲ್ಲ, ಸಿದ್ದರಾಮಯ್ಯನವರಲ್ಲೂ ದುಡ್ಡಿಲ್ಲ” ಎಂಬ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ.
ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳ ಪೂರ್ಣ ಬಹುಮತದೊಂದಿಗೆ ಆಶೀರ್ವದಿಸಿ ಐತಿಹಾಸಿಕ ಗೆಲುವಿನೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಗ್ಯಾರಂಟಿ ಸರ್ಕಾರಕ್ಕೆ ಇದೀಗ ಎರಡನೇ ವರ್ಷದ ಸಂಭ್ರಮ,