ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಧರ್ಮಸ್ಥಳದ ಕುರಿತಾಗಲಿ ಅಥವಾ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧವಾಗಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತಿದ್ದಾಗಿ ಆರೋಪಿಸಿದ್ದ ಮುಸುಕುಧಾರಿ, ಇದೀಗ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾನೆ. ವಿಶೇಷ ತನಿಖಾ ತಂಡ (ಎಸ್ಐಟಿ) ಮುಂದೆ ಆತ ನೀಡಿರುವ ಹೇಳಿಕೆ ಕುತೂಹಲ ಕೆರಳಿಸಿದ್ದು, ತನ್ನನ್ನು ಮೂವರ ಗುಂಪು ತಪ್ಪು ಹೇಳಿಕೆ ನೀಡುವಂತೆ ಬಲವಂತಪಡಿಸಿತ್ತು ಎಂದು ಬಾಯ್ಬಿಟ್ಟಿದ್ದಾನೆ.
ದೇಶದಲ್ಲಿ ಸಂಚಲನ ಮೂಡಿಸಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.
ಶ್ರೀ ಕ್ಷೇತ್ರದ ಬಗ್ಗೆ ಇರುವ ನಂಬಿಕೆ, ಧರ್ಮಾಧಿಕಾರಿಗಳ ಮುಖೇನ ನಡೆಯುತ್ತಿರುವ ಸಮಾಜಮುಖಿ ಸೇವೆಗಳ ಬಗ್ಗೆ ವ್ಯವಸ್ಥಿತ ಅಪಪ್ರಚಾರ ನಡೆಸಿ ಜನರ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟುಮಾಡುತ್ತಿರುವ ಸಮಾಜ ಕಂಟಕರ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ.
ಧರ್ಮಸ್ಥಳದಲ್ಲಿ ಅನಾಮಿಕ ದೂರಿನ ಮೇರೆಗೆ ಶವಗಳ ಶೋಧ ನಡೆಸುತ್ತಿದ್ದ ಎಸ್ಐಟಿ ತಂಡ ಕಾರ್ಯಾಚರಣೆ ಮುಗಿಸಿ ಹಿಂದಿರುಗಿದ ಬಳಿಕ, ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು.