ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ದೂರುದಾರರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂಬ ಕೆಲವು ಮಾಧ್ಯಮಗಳ ವರದಿಗಳು ಸಂಪೂರ್ಣ ಸುಳ್ಳು ಎಂದು ತನಿಖೆ ನಡೆಸುತ್ತಿರುವ ಎಸ್‌ಐಟಿ (ವಿಶೇಷ ತನಿಖಾ ತಂಡ) ಸ್ಪಷ್ಟಪಡಿಸಿದೆ.
ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರಿದಿರುವ ನಡುವೆಯೇ, ನೂರಾರು ಶವಗಳನ್ನು ಹೂತಿದ್ದಾಗಿ ಆರೋಪಿಸಿದ್ದ ಅನಾಮಿಕ ದೂರುದಾರ ಇದೀಗ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ದೇಗುಲದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಧರ್ಮಸ್ಥಳದ 'ಸಮಾಧಿ ರಹಸ್ಯ ಪ್ರಕರಣ'ಕ್ಕೆ ಸಂಬಂಧಿಸಿದಂತೆ, ಮುಸುಕುಧಾರಿ ವ್ಯಕ್ತಿಯು ಗುರುತು ಮಾಡಿದ 13 ಸ್ಥಳಗಳಲ್ಲಿ ಶವಗಳ ಅವಶೇಷಗಳಿಗಾಗಿ ಇಂದು (ಮಂಗಳವಾರ, ಜುಲೈ 29) ಮಹತ್ವದ ಉತ್ಖನನ ಕಾರ್ಯ ನಡೆಯಲಿದೆ.
ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ದಿಂದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.