ಶ್ರೀ ಕ್ಷೇತ್ರದ ಬಗ್ಗೆ ಇರುವ ನಂಬಿಕೆ, ಧರ್ಮಾಧಿಕಾರಿಗಳ ಮುಖೇನ ನಡೆಯುತ್ತಿರುವ ಸಮಾಜಮುಖಿ ಸೇವೆಗಳ ಬಗ್ಗೆ ವ್ಯವಸ್ಥಿತ ಅಪಪ್ರಚಾರ ನಡೆಸಿ ಜನರ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟುಮಾಡುತ್ತಿರುವ ಸಮಾಜ ಕಂಟಕರ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ.
ಧರ್ಮಸ್ಥಳದಲ್ಲಿ ತಲೆಬುರುಡೆ ಪತ್ತೆ ಪ್ರಕರಣದ ಕುರಿತು ವಿಶೇಷ ತನಿಖಾ ದಳ (ಎಸ್ಐಟಿ) ವರದಿ ನೀಡುವವರೆಗೂ ನಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮೆಹದಿ ನಗರದ ಜಾವೀದ್ ಪಾಷ (34) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.