ಧರ್ಮಸ್ಥಳ ಧಾರ್ಮಿಕ ಸಂಸ್ಥೆಯ ವಿರುದ್ಧ ನಡೆಯುತ್ತಿರುವ ಎಲ್ಲಾ ಷಡ್ಯಂತ್ರ ಮತ್ತು ಅಪಪ್ರಚಾರಗಳಿಗೆ ತಕ್ಷಣವೇ ಪೂರ್ಣ ವಿರಾಮ ಹಾಕಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒತ್ತಾಯಿಸಿದ್ದಾರೆ.
ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರಿದಿರುವ ನಡುವೆಯೇ, ನೂರಾರು ಶವಗಳನ್ನು ಹೂತಿದ್ದಾಗಿ ಆರೋಪಿಸಿದ್ದ ಅನಾಮಿಕ ದೂರುದಾರ ಇದೀಗ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ದೇಗುಲದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಧರ್ಮ ಮತ್ತು ದೇವರ ವಿಷಯದಲ್ಲಿ ಜನರ ನಂಬಿಕೆಗಳಿಗೆ ಘಾಸಿ ಮಾಡುವ ಷಡ್ಯಂತ್ರವನ್ನು ದೇಶದ ಒಳಗೆ ಹಾಗೂ ಹೊರಗಿನ ಕೆಲವು ಶಕ್ತಿಗಳು ನಡೆಸುತ್ತಿವೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರವಾಗಿ ಟೀಕಿಸಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಹೆಣಗಳನ್ನು ಹೂತು ಹಾಕಿರುವುದಾಗಿ ಇತ್ತೀಚೆಗೆ ವ್ಯಕ್ತಿಯೋರ್ವ ಧರ್ಮಸ್ಥಳ ಠಾಣೆಗೆ ದೂರು ನೀಡಿದ ಪ್ರಕರಣದ ತನಿಖೆಯನ್ನು ಹಿರಿಯ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ನಡೆಸಬೇಕು ಎಂದು ದೂರುದಾರನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ದೇಶಪಾಂಡೆ ಒತ್ತಾಯಿಸಿದ್ದಾರೆ.