"ಮಾದಕ ದ್ರವ್ಯ ಪೆಡ್ಲರ್‌ಗಳು ವಿದ್ಯಾರ್ಥಿಗಳನ್ನು ಪ್ರಮುಖವಾಗಿ ತಮ್ಮ ಜಾಲಕ್ಕೆ ಸೆಳೆಯಲು ಪ್ರಯತ್ನಿಸುತ್ತಾರೆ. ಆದರೆ ನೀವು ಅದಕ್ಕೆ ಬಲಿಯಾಗದೆ, ನಿಮ್ಮ ಭವಿಷ್ಯ ನಿರ್ಮಾಣದ ಕಡೆಗೆ ಪ್ರಯತ್ನಶೀಲರಾಗಬೇಕು" ಎಂದು ಬಂದರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಹೇಳಿದರು.
ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಆಶ್ರಯದಲ್ಲಿ ಗುರುವಾರ ನಡೆದ ಆಸ್ಟ್ರಾನೊಮಿ ಎಕ್ಸ್‌ಪೋ 1.0ರ ಆವೃತ್ತಿ ನಗರದ ಮಂತ್ರಿ ಮಾಲ್‌ನ ಐನಾಕ್ಸ್ ಚಿತ್ರಮಂದಿರಲ್ಲಿ ಗುರುವಾರ ಉದ್ಘಾಟನೆಗೊಂಡಿತು.
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹತ್ತನೇ ತರಗತಿ ಮತ್ತು ಪಿಯುಸಿ ಪಾಸಾದ 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವು ಟ್ರಸ್ಟಿನ ಅಧ್ಯಕ್ಷ ಅವಿನಾಶ್ ವಿ ಶೆಟ್ಟಿಯವರ ನೇತೃತ್ವದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆಯಿತು.
ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯ ಸಂದರ್ಭ ಬ್ರಾಹ್ಮಣ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವುದು ತೀವ್ರ ಆಕ್ರೋಶಕಾರಿ ಹಾಗೂ ಖಂಡನೀಯವಾಗಿದೆ.