ನಕಲಿ ಪರಶುರಾಮ ಪ್ರತಿಮೆ ವಿವಾದದಿಂದ ಕಾರ್ಕಳದಲ್ಲಿ ವರ್ಚಸ್ಸು ಕಳೆದುಕೊಂಡಿರುವವರು ವಿನಾಕಾರಣ ಕಾಂಗ್ರೆಸ್ ನಾಯಕರ ವಿರುದ್ದ ಆರೋಪ ಮಾಡುತ್ತಿದ್ದಾರೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್ ಹೇಳಿದ್ದಾರೆ.
ದೇಶದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಮೇಲೆ ಕೋರ್ಟ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿಯೇ ಶೂ ಎಸೆಯುವ ಪ್ರಯತ್ನ ನಡೆದಿರುವುದು ಖಂಡನೀಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ತಿಳಿಸಿದ್ದಾರೆ.
ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಣಜಾರು ಗ್ರಾಮದ ಮಡಿಬೆಟ್ಟಿನಲ್ಲಿ ಹೊಸ ಆರೋಗ್ಯ ಉಪಕೇಂದ್ರ ಶಿಲಾನ್ಯಾಸ, ಬೈಲೂರು ಪಳ್ಳಿ ಕ್ರಾಸ್ ಬಳಿ ಪಶು ಆಸ್ಪತ್ರೆಗೆ ಗುದ್ದಲಿ ಪೂಜೆ ಹಾಗೂ ಪಂಚಾಯತ್ ಉಪಕೇಂದ್ರ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 25ರಂದು ಜರುಗಿತು.
ಕಾರ್ಕಳದ ಹೆಮ್ಮೆಯಾಗಬೇಕಿದ್ದ ಪರಶುರಾಮ ಥೀಮ್ ಪಾರ್ಕ್, ಶಾಸಕ ಸುನೀಲ್ ಕುಮಾರ್ ಅವರ ರಾಜಕೀಯ ಹಿತಾಸಕ್ತಿಗೆ ಬಲಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಆರೋಪಿಸಿದ್ದಾರೆ.