ದೆಹಲಿ-ಎನ್‌ಸಿಆರ್‌ನ ಬೀದಿ ನಾಯಿಗಳ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಆಗಸ್ಟ್ 8ರ ತೀರ್ಪಿನಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿ ಹೊಸ ಆದೇಶವನ್ನು ಹೊರಡಿಸಿದೆ.
ನಟ ದರ್ಶನ್ ಮತ್ತು ಸಹ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಟಿ ಹಾಗೂ ಮಾಜಿ ಸಂಸದೆ ರಮ್ಯಾ (ದಿವ್ಯಾ ಸ್ಪಂದನಾ) ಇನ್‌ಸ್ಟಾಗ್ರಾಮ್‌ನಲ್ಲಿ ಮಹತ್ವದ ಪೋಸ್ಟ್ ಹಂಚಿಕೊಂಡಿದ್ದಾರೆ.
ವೈವಾಹಿಕ ವಿವಾದ ಪ್ರಕರಣವೊಂದರಲ್ಲಿ ₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯೂ ಕಾರು ಮತ್ತು ಮುಂಬೈನಲ್ಲಿ ಮನೆಯನ್ನು ಪರಿಹಾರವಾಗಿ ನೀಡಬೇಕೆಂದು ಕೋರಿದ್ದ ಮಹಿಳೆಯೊಬ್ಬರಿಗೆ, "ತಾವೇ ದುಡಿಯಬಹುದಲ್ಲವೇ?" ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ನೀಡಿದ್ದ ಜಾಮೀನು ಆದೇಶದ ಕುರಿತು ಭಾರತದ ಸರ್ವೋಚ್ಚ ನ್ಯಾಯಾಲಯವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.