ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ಕರೆ ಮಾಡಿ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಕರ್ತವ್ಯ ಲೋಪ ಹಾಗೂ ಮಹಿಳೆಯ ಗೌರವಕ್ಕೆ ಧಕ್ಕೆ ತಂದಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ, ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ಚಂದ್ರ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.