ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿ ಬಿ ವಿಜಯೋತ್ಸವದಲ್ಲಿ ಅಪಾರ ಅಭಿಮಾನಿಗಳು ಭಾಗವಹಿಸಿದ ಪರಿಣಾಮ ಭೀಕರ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, 11 ಮಂದಿ ದುರಂತವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ದೇಶದಾದ್ಯಂತ ಆಘಾತ ಉಂಟುಮಾಡಿದ್ದು, ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಈ ಕುರಿತು ತೀವ್ರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.