ಕಾಪು ತಾಲೂಕಿನ ದಂಡತೀರ್ಥ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 11.10.2025 ರಂದು ಬೆಳಿಗ್ಗೆ 10.00 ರಿಂದ ಸಂಜೆ 4.00 ಗಂಟೆಯ ತನಕ ಬೃಹತ್ ಉಚಿತ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರದ ನಿರ್ದೇಶನ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದ ವ್ಯಕ್ತಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್ ₹5 ಲಕ್ಷ ಠೇವಣಿ ಇರಿಸುವಂತೆ ಸೂಚಿಸಿದೆ.
ಹಲವಾರು ವಿವಾದಗಳಿಗೆ ಕಾರಣವಾದ ಬೈಲೂರು ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಮತ್ತೆ ನೈಜ ಕಂಚಿನ ಪರಶುರಾಮ ಪ್ರತಿಮೆ ಪ್ರತಿಷ್ಟಾಪನೆಗಾಗಿ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಬೈಲೂರಿನ ಹಿರಿಯ ಮುಖಂಡರಾದ ಸುಧೀರ್ ಹೆಗ್ಡೆ ಸ್ವಾಗತಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಖ್ಯೆ 500 ಕೋಟಿ ತಲುಪಿದ್ದು ಈ ಐತಿಹಾಸಿಕ ಸಾಧನೆಯನ್ನು ಕಾರ್ಕಳ ಕಾಂಗ್ರೆಸ್ ವತಿಯಿಂದ ವಿಶಿಷ್ಟವಾಗಿ ಆಚರಿಸಲಾಯಿತು.