ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 14,000ಕ್ಕೂ ಹೆಚ್ಚು ಮಕ್ಕಳು ಅಪಹರಣಕ್ಕೊಳಗಾಗಿದ್ದು, ಈ ಪೈಕಿ 1,336 ಮಕ್ಕಳ ಪ್ರಕರಣಗಳು ಇನ್ನೂ ನಿಗೂಢವಾಗಿ ಉಳಿದಿವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹನೀಯರಾದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸುವ ಮೂಲಕ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಉಡುಪಿಯ ಪ್ರಸಿದ್ಧ ಉದ್ಯಮಿ ಹಾಗೂ ಆಭರಣ ಜ್ಯುವೆಲ್ಲರ್ಸ್‌ನ ನಿರ್ದೇಶಕ ಸುಭಾಶ್ ಎಂ. ಕಾಮತ್ ಅವರು ತಮ್ಮ ಛಾಯಾಗ್ರಹಣದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾರೆ. ಅವರ ವನ್ಯಜೀವಿ ಛಾಯಾಚಿತ್ರವೊಂದು ಪ್ರತಿಷ್ಠಿತ ಕ್ಲಬ್ ಗೋಲ್ಡ್ ಅವಾರ್ಡ್‌ಗೆ ಭಾಜನವಾಗಿದೆ.
ದಿನಾಂಕ 23.08.20253e ಶನಿವಾರದಂದು ಕಾರ್ಕಳ ತಾಲೂಕು ನೀರೆ ಗ್ರಾಮ ಪಂಚಾಯತ್‌ನ ನೂತನ ಕಛೇರಿ ಕಟ್ಟಡ, ಸಭಾಭವನ, ಸಂಜೀವಿನಿ ಶೆಡ್ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಛೇರಿ ಉದ್ಘಾಟಿಸಲು ಆಯೋಜಿಸಲಾದ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ
ಜೆಸಿಐ ಕಾರ್ಕಳ ರೂರಲ್ ವತಿಯಿಂದ ವಲಯ ನಿರ್ದೇಶಿತ ಆರೋಹಣ ವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳ ಸಪ್ತಾಹದ ಹೂರಣ ಇದರ ಅಂಗವಾಗಿ ಆಹಾರ - ವಿಹಾರ , ಆಚಾರ - ವಿಚಾರಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಮತ್ತು ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ್ಯ ವಿಕಸನ ಕುರಿತ ಮೊದಲ ವಿಶೇಷ ತರಬೇತಿ ಕಾರ್ಯಕ್ರಮ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು , ಕಾಬೆಟ್ಟು ಕಾರ್ಕಳ ಇಲ್ಲಿ ಯಶಸ್ವಿಯಾಗಿ ನಡೆಯಿತು.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.