ಕಾರ್ಕಳದ ಇರ್ವತ್ತೂರು ಗ್ರಾಮ ಪಂಚಾಯತ್‌ನಲ್ಲಿ ಬೃಹತ್ ರಾಜೀನಾಮೆ ಅಲೆ ಕಾಣಿಸಿದೆ. ಬಿಜೆಪಿ ಬೆಂಬಲಿತ 7 ಸದಸ್ಯರಲ್ಲಿ ಉಪಾಧ್ಯಕ್ಷೆ ಸೇರಿದಂತೆ 6 ಜನ ಸದಸ್ಯರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಕಲ್ಯಾಣಕ್ಕಾಗಿ ಹೆಬ್ರಿ ಶ್ರೀ ಅನಂತಪದ್ಮನಾಭ ಪಾದಯಾತ್ರಾ ಸಮಿತಿಯ ವಿಪ್ರ ಬಾಂಧವರು ಹೆಬ್ರಿಯ ಅನಂತಪದ್ಮನಾಭ ದೇವಸ್ಥಾನದಿಂದ ನಾರಾವಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ಭಕ್ತಿ ಪಾದಯಾತ್ರೆ ನಡೆಸಿದರು.
ಶ್ರೀ ಪುತ್ತಿಗೆ ಮಠದ ಪರ್ಯಾಯ ಸ್ವಾಮೀಜಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಅಕ್ಷಯ ತೃತೀಯಾ ಹಬ್ಬದ ಅಂಗವಾಗಿ 30ನೇ ಏಪ್ರಿಲ್ 2025 ರಂದು ಸಂಜೆ 4 ಗಂಟೆಗೆ ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ