ಆಂಧ್ರಪ್ರದೇಶದ ನೆಲ್ಲೂರಿನ ಪ್ರತಿಷ್ಠಿತ ಆದಿಶಂಕರ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಹಾಲಂಡಿನ ಮಹರ್ಷಿ ವೇದಿಕ್ ಯುನಿವರ್ಸಿಟಿ ಇವುಗಳ ವತಿಯಿಂದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸನಾತನ ರತ್ನ ಬಿರುದನ್ನಿತ್ತು ಸಂಮಾನಿಸಲಾಗಿದೆ.
ಕೊಡವೂರು ಪಾಳೆಕಟ್ಟೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ದೇವರಬೆಟ್ಟು ಆವರಣದ ಹೊರಗಡೆ ಇರುವ ಕಾಣಿಕೆ ಡಬ್ಬಿಯನ್ನು ಮುರಿದು ಅದರಲ್ಲಿದ್ದ ಹಣ ಕಳವು ಮಾಡಿರುವ ಘಟನೆ ಎ.19 ರಂದು ಸಂಜೆ ನಡೆದಿದೆ.
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ವಿಶ್ವವಾಣಿ ಪತ್ರಿಕೆಯು ನೀಡುವ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’ಕ್ಕೆ ಈ ಬಾರಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಮತ್ತು ಈಟಿವಿ ಭಾರತ್‌ನ ಜಿಲ್ಲಾ ವರದಿಗಾರರಾದ ಸಂದೀಪ್ ಪೂಜಾರಿ (37) ಅವರು ಏಪ್ರಿಲ್ 20ರಂದು ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.