ಹಿರಿಯಡ್ಕದ ಮಾಣೈಮಠ ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಶ್ರೀ ಆಂಜನೇಯ ಭಜನಾ ಮಂಡಳಿ, ಮಾಣೈ ಎಂಬ ನಾಮಾಂಕಿತದೊಂದಿಗೆ ಹೊಸ ಕುಣಿತ ಭಜನಾ ಮಂಡಳಿಯನ್ನು ಶ್ರೀ ಮುಖ್ಯಪ್ರಾಣ ದೇವರ ಪ್ರಧಾನ ಅರ್ಚಕರಾದ ಶ್ರೀ ಮಾಧವ ಉಪಾಧ್ಯಾಯ ಇವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.
ರಾಷ್ಟ್ರೀಯ ತರಬೇತುದಾರ ಶ್ರೀ ದೀಪಕ್ ರಾಜ್ ಅವರು ಜೆ.ಸಿ.ಐ ಕಾರ್ಕಳದ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.
ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ರೋಟರಿ ಕ್ಲಬ್, ಆನ್ಸ್ ಕ್ಲಬ್ ಹಾಗೂ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಘಟಕದ ವತಿಯಿಂದ ನಡೆದ ಮಕ್ಕಳು ಎದುರಿಸುತ್ತಿರುವ ಮನೋಸಮಸ್ಯೆಗಳ ಕುರಿತ ಕಾರ್ಯಕ್ರಮದಲ್ಲಿ ಹಿಪ್ನೋ ಥೆರಪಿಸ್ಟ್ ಶ್ರೀಮತಿ ಜ್ಯೋತಿ ಮಹಾದೇವ್ ಮಾತನಾಡಿದರು.