ಧರ್ಮಸ್ಥಳದಲ್ಲಿ ಸೋಮವಾರ ನಡೆದ ಬಿಜೆಪಿ ಹಮ್ಮಿಕೊಂಡಿದ್ದ “ಧರ್ಮಸ್ಥಳ ಚಲೋ” ಧರ್ಮಯಾತ್ರೆ ಬೃಹತ್ ಸಮಾವೇಶವುಯಶಸ್ವಿಯಾಗಿ ಅಂತ್ಯಗೊಂಡ ತಕ್ಷಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೌಜನ್ಯಾ ಕುಟುಂಬವನ್ನು ಭೇಟಿ ಮಾಡಿದರು.
ಕರಾವಳಿಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ, ಉಡುಪಿ, ಮತ್ತು ಕೊಲ್ಲೂರು ಬಗ್ಗೆ ಅವಹೇಳನಕಾರಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಕೇರಳದ ಇಬ್ಬರು ವ್ಯಕ್ತಿಗಳ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.