ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭವತಿಯನ್ನಾಗಿಸಿದ ಆರೋಪಕ್ಕೆ ಸಂಬಂಧಿಸಿದಂತೆ, ಅನ್ಯಕೋಮಿನ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿಯ ಅಭಿಮಾನಿಗಳ ವತಿಯಿಂದ ಆಗಸ್ಟ್ 3ರಂದು ಎಂಜಿಎಂ ಕಾಲೇಜಿನಲ್ಲಿ ನಡೆಯಲಿರುವ "ಬನ್ನಂಜೆ 90 ಉಡುಪಿ ನಮನ" ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಭಾನುವಾರ ಬಿಡುಗಡೆಗೊಳಿಸಿದರು.
ಸಹಕಾರ ತತ್ವದಡಿ ಸೇವೆ ಸಲ್ಲಿಸುವುದರ ಜೊತೆಗೆ ಪರಿಸರ ಸಂರಕ್ಷಣೆಯಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಶ್ಲಾಘನೀಯ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.
ಬಿಜೆಪಿಯ 'ಸುಳ್ಳಿನ ಪ್ರತಿಭಟನೆ'ಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ 'ಸತ್ಯದರ್ಶನ' ಪ್ರತಿಭಟನೆ ನಡೆಸಿ, ರಾಜಕೀಯ ಸಮರಕ್ಕೆ ಇಳಿದಿದೆ. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ನೇತೃತ್ವದಲ್ಲಿ ಮಂಗಳವಾರ ಅಂಬಲಪಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಪಿಡಿಎ ಇಂಜಿನಿಯರಿಂಗ್ ಕಾಲೇಜಿನ 13 ನೇ ಪದವಿ ಪ್ರದಾನ ಸಮಾರಂಭವು ಆಗಸ್ಟ್ 30, 2025 ರ ಶನಿವಾರ ಬೆಳಿಗ್ಗೆ 10:00 ಗಂಟೆಗೆ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಚಟುವಟಿಕೆ ಕೇಂದ್ರ (ಎಸ್‌ಎಸಿ) ಪಿಡಿಎ ಸಭಾಂಗಣದಲ್ಲಿ ನಡೆಯಲಿದೆ.