ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಶ್ರೀ ಕೃಷ್ಣ ವೃದ್ದಾಶ್ರಮ ಕೊಡವೂರು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀಕೃಷ್ಣನ ಲೀಲೋತ್ಸವದಲ್ಲಿ ಭಾಗವಹಿಸುವ ಭಕ್ತರಿಗಾಗಿ ಉಚಿತ ಮಜ್ಜಿಗೆ ಸೇವೆಯನ್ನು ವಿತರಿಸಲಾಯಿತು.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-40ರಲ್ಲಿ “ಸಕಾರಾತ್ಮಕ ಆಲೋಚನೆ ಸಾಧನೆಗೆ ಪ್ರೇರಣೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ವೀರೇಶ್ ಗದಿಗೆಪ್ಪಗೌಡ ಪಾಟೀಲ್ ಮಾತನಾಡಿದರು.
ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್‌ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ.