ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗರ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ರೂ. 02.05 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಅವರು ತಿಳಿಸಿರುತ್ತಾರೆ.
ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ತನ್ನ ಅಂಗಡಿಯಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ವ್ಯಕ್ತಿಯನ್ನು ಹಿರಿಯಡ್ಕ ಪೊಲೀಸರು ಜೂನ್ 10ರಂದು ಬಂಧಿಸಿದ್ದಾರೆ.
ಕೇವಲ ರಾಜಕಾರಣ, ಅಧಿಕಾರ ಅನುಭವಿಸಲು ಸೀಮಿತವಾಗದ ಬಿಜೆಪಿ ದೇಶದ ಅಭಿವೃದ್ಧಿಯ ಬದ್ಧತೆ ಹೊಂದಿದ್ದು ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ 11 ವರ್ಷಗಳ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಇಂದ್ರಾಳಿ ರೈಲು ನಿಲ್ದಾಣದ ಹೊರವಲಯದ ಪಾದಚಾರಿ ಮಾರ್ಗದಲ್ಲಿ ಮಂಗಳವಾರ ನಸುಕಿನ ಜಾವ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಒಬ್ಬ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಮತ್ತು ಸ್ಥಳೀಯ ಆಟೋ ಚಾಲಕರು ರಕ್ಷಿಸಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.