ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ "ಶಕ್ತಿ ಯೋಜನೆ"ಯು ಪ್ರತಿಷ್ಠಿತ "Golden Book of World Record" ನಲ್ಲಿ ದಾಖಲಾಗಿದೆ.
ಮಂಡಲಗಳ ವ್ಯಾಪ್ತಿಯಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ , ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 14,000ಕ್ಕೂ ಹೆಚ್ಚು ಮಕ್ಕಳು ಅಪಹರಣಕ್ಕೊಳಗಾಗಿದ್ದು, ಈ ಪೈಕಿ 1,336 ಮಕ್ಕಳ ಪ್ರಕರಣಗಳು ಇನ್ನೂ ನಿಗೂಢವಾಗಿ ಉಳಿದಿವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹನೀಯರಾದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸುವ ಮೂಲಕ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಉಡುಪಿಯ ಪ್ರಸಿದ್ಧ ಉದ್ಯಮಿ ಹಾಗೂ ಆಭರಣ ಜ್ಯುವೆಲ್ಲರ್ಸ್‌ನ ನಿರ್ದೇಶಕ ಸುಭಾಶ್ ಎಂ. ಕಾಮತ್ ಅವರು ತಮ್ಮ ಛಾಯಾಗ್ರಹಣದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾರೆ. ಅವರ ವನ್ಯಜೀವಿ ಛಾಯಾಚಿತ್ರವೊಂದು ಪ್ರತಿಷ್ಠಿತ ಕ್ಲಬ್ ಗೋಲ್ಡ್ ಅವಾರ್ಡ್‌ಗೆ ಭಾಜನವಾಗಿದೆ.