ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಬೀಸಿದ ಭೀಕರ ಸುಳಿಗಾಳಿ ಯರ್ಲಪಾಡಿ ಗ್ರಾಮದ ಜಾರ್ಕಳ ಅರ್ಬಿ ಪ್ರದೇಶದಲ್ಲಿ ಭಾರಿ ಹಾನಿ ಉಂಟುಮಾಡಿದೆ. ಈ ಅನಿರೀಕ್ಷಿತ ಪ್ರಕೃತಿ ವಿಕೋಪದಿಂದಾಗಿ ಹತ್ತಾರು ಮನೆಗಳು, ವಿದ್ಯುತ್ ಕಂಬಗಳು ಹಾಗೂ ಕೃಷಿ ತೋಟಗಳಿಗೆ ತೀವ್ರ ಹಾನಿಯಾಗಿದೆ.
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತದ 78 ನೇ ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಉಡುಪಿಯ ಗುಂಡಿಬೈಲಿನ ಶ್ರೀ ಅಭಿರಾಮ ಧಾಮ ಸಂಕೀರ್ತನ ಮಂದಿರದಲ್ಲಿ ಕಳೆದ ಬುಧವಾರ ಆಯೋಜನೆಗೊಂಡ ಜಿಲ್ಲಾ ಮಟ್ಟದ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಆಗಸ್ಟ್ 15ರಂದು ನಡೆಯಿತು.