ಕಂಚಿನ ಮೂರ್ತಿ ನಿರ್ಮಿಸಬೇಕಿದ್ದಲ್ಲಿ ಹಿತ್ತಾಳೆಯ ಮೂರ್ತಿ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ ಆರೋಪದ ಮೇಲೆ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ವಿರುದ್ಧ ಪೊಲೀಸರು 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಕಾರ್ಕಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಭಯದ ವಾತಾವರಣ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ ಯುವಕನೋರ್ವನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದ ಅಂಬಲಪಾಡಿಯ ವಿಶು ಶೆಟ್ಟಿ ಅವರ ಮಾನವೀಯ ಪ್ರಯತ್ನದಿಂದ ಇದೀಗ ಯುವಕ ತನ್ನ ಕುಟುಂಬವನ್ನು 12 ವರ್ಷಗಳ ಬಳಿಕ ಸೇರಿಕೊಂಡಿದ್ದಾನೆ.
ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿ ಧಾರ್ಮಿಕ ವಿಧಿಯಾದ "ಕಟ್ಟಿಗೆ ಮುಹೂರ್ತವು" ಇಂದು ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ವಿಜೃಂಭಣೆಯಿಂದ ನಡೆಯಿತು.
ಶ್ರೀ ಗುರು ಪೂರ್ಣಿಮಾ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಉಡುಪಿ ನಗರಾಧ್ಯಕ್ಷ ಶ್ರೀವತ್ಸರವರ ನೇತೃತ್ವದಲ್ಲಿ ಹಿರಿಯ ಯಕ್ಷಗಾನ ಕಲಾವಿದ, ಖ್ಯಾತ ಯಕ್ಷ ಗುರು, ಉಡುಪಿಯ 'ಯಕ್ಷ ಸಂಜೀವ ಯಕ್ಷಗಾನ ಕೇಂದ್ರ'ದ ಮುಖ್ಯಸ್ಥರಾದ ಬನ್ನಂಜೆ ಸಂಜೀವ ಸುವರ್ಣ ಅವರನ್ನು ಅವರ ನಿವಾಸದಲ್ಲಿ ಗೌರವಿಸಿ ಗುರು ವಂದನೆ ಸಲ್ಲಿಸಲಾಯಿತು.