ಕುಂದಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳ ಮೇಲಿನ ನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ತೀವ್ರ ದೌರ್ಜನ್ಯ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶೈಲಿಯನ್ನು ತೀವ್ರವಾಗಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, “ಬಂಡಾಟ, ಗೂಂಡಾಗಿರಿ ಹೆಚ್ಚು ದಿನ ನಡೆಯುವುದಿಲ್ಲ. ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ ಉತ್ತರ ನೀಡುವ ಕಾಲ ಬಂದೇ ಬರುತ್ತದೆ,” ಎಂದು ಎಚ್ಚರಿಸಿದರು.
2024-25 ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ.93.90 ತೇರ್ಗಡೆಯೊಂದಿಗೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನೀಯಾಗಿದೆ; ಈ ಸಾಧನೆಗೆ ಜಿಲ್ಲಾಡಳಿತ, ಉಪ ನಿರ್ದೇಶಕರ ಮಾರ್ಗದರ್ಶನ, ಆಡಳಿತ ಮಂಡಳಿಗಳ ಸಹಕಾರ ಹಾಗೂ ಪ್ರಾಂಶುಪಾಲರ ಸಂಘದ ಶ್ರಮ ಕಾರಣವಾಗಿದೆ.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.