ಭಾರತ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರದ ಸಹಯೋಗದಲ್ಲಿ ನಡೆದ "ವಿಕಸಿತ ಭಾರತ ಯುವ ಪಾರ್ಲಿಮೆಂಟ್ ಸ್ಪರ್ಧೆ"ಯಲ್ಲಿ ಉಡುಪಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಯ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿ ವಿವಿಧ ಸವಲತ್ತುಗಳನ್ನು ವಿತರಿಸಿದರು.
ಕನ್ನಡ ಪರ ಸಂಘಟನೆಗಳು ಶನಿವಾರ (ಮಾರ್ಚ್.22) ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಮತ್ತು ಕೆನರಾ ಬಸ್ ಮಾಲಕರ ಸಂಘ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಪೊಲೀಸ್ ಠಾಣೆಯ ಮುಂದೆ ಗುಂಪು ಸೇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.