ಮೈತ್ರಿ ಸೇವಾ ಸಂಘ ರಿ.ಬೈಲೂರು ಇದರ ಸಾಮಾನ್ಯ ಸಭೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಗಣಿತ ನಗರ ಜ್ಞಾನ ಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕಣಜಾರು ಹಡಂಕೋಳಿಯ ಸ್ವಸ್ತಿ ಕಾಮತ್ ಹಾಗೂ ಫಿಜಿಯೋಥೆರಫಿಯಲ್ಲಿ ದ್ವಿತೀಯ ರ‍್ಯಾಂಕ್ ಅನ್ನು ಪಡೆದಿರುವ ಮೂಡುಬಿದರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕೌಡೂರಿನ ನಿಶಾ ಶೆಟ್ಟಿ ಇವರುಗಳನ್ನು ಶಾಲು ಹೊಂದಿಸಿ ಫಲ ಪುಷ್ಪ ಹಾಗೂ ಗೌರವಧನ ನೀಡಿ ಗೌರವಿಸಲಾಯಿತು.
ಉಡುಪಿಯ ಕೋರ್ಟ್ ಹಿಂಭಾಗದ ಲೋಕೋಪಯೋಗಿ ಇಲಾಖೆ (PWD) ಕಚೇರಿ ಬಳಿ ನಡೆದ ಕ್ರೇನ್ ದುರ್ಘಟನೆ ಒಂದರಲ್ಲಿ ಹಿರಿಯ ನಾಗರಿಕರು ಸಾವಿಗೀಡಾಗಿದ್ದು, ಜೊತೆಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಹಾಗೂ ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಕಿದಿಯೂರು ಇವರ ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರಗಿತು.