ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಂತಾವರ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ, ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿದ್ದ ಎರಡು ಹೆಸರಾಂತ ಕೋಣಗಳು ಸಾವಿಗೀಡಾದ ದುರಂತ ನಡೆದಿದೆ.
ಆದಾಯಕ್ಕೆ ಮೀರಿ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮೆಸ್ಕಾಂ ಅಧಿಕಾರಿಯೊಬ್ಬರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಸ್ಪತ್ರೆಗಳ ಆವರಣದಿಂದ ತೆರವುಗೊಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮ ಕೀಳುಮಟ್ಟದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಗಾರು ಮಳೆಯ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ಉಡುಪಿ ನಗರಸಭೆ ವ್ಯಾಪ್ತಿಯ ಎಲ್ಲ 35 ವಾರ್ಡ್ ಗಳಿಗೆ ವಿಶೇಷ ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.