ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟವೇ ರಣರೋಚಕ ಕಾದಾಟಕ್ಕೆ ಸಾಕ್ಷಿಯಾಗಿದೆ. ಅದರಲ್ಲೂ ಈ ಪಂದ್ಯದ ವೇಳೆ ಕೊಹ್ಲಿ ಆಕ್ರಮಣಕಾರಿ ವರ್ತನೆಯಿಂದ ಗಮನ ಸೆಳೆದಿದ್ದಾರೆ. ಈ ನಡೆಯನ್ನು ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗಂಭೀರವಾಗಿ ಪರಿಗಣಿಸಲಿದೆ ಎಂದು ವರದಿಯಾಗಿದೆ. ಪಂದ್ಯದ 10ನೇ ಓವರ್ ಮುಕ್ತಾಯದ ವೇಳೆ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಬ್ಯಾಟರ್ ಸ್ಯಾಮ್ ಕೊನ್ಸ್ಟಾಸ್ ಅವರನ್ನು ಭುಜಕ್ಕೆ ಭುಜ ನೀಡಿ ಕೆಣಕಿದ್ದರು