
ಬೆಂಗಳೂರು: ಕಾವೇರಿ ನೀರಿನ ದರ ಹೆಚ್ಚಳ ಮತ್ತು ವಿದ್ಯುತ್ ದರ ಏರಿಕೆ ಸುಳಿವು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಜಲಮಂಡಳಿ ಸಭೆಯಲ್ಲಿ ಮಾತನಾಡಿ, ಕಾವೇರಿ ನೀರನ್ನು ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸರ್ಕಾರಕ್ಕೆ, ಎಲ್ಲಾ ಸರ್ಕಾರಿ ಸೇವೆಗಳನ್ನು ಉಚಿತವಾಗಿ ನೀಡಲು ಆರ್ಥಿಕವಾಗಿ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಸರ್ಕಾರಿ ನೌಕರರ ಸಂಬಳ ಹೆಚ್ಚಳದ ಬೇಡಿಕೆಯನ್ನು ಉಲ್ಲೇಖಿಸುತ್ತಾ, ಎಲ್ಲಾ ವೆಚ್ಚಗಳನ್ನು ಸಮತೋಲನಗೊಳಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.ಅವರ ಈ ಹೇಳಿಕೆಯಿಂದ ಕಾವೇರಿ ನೀರಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಆರಂಭವಾಗಿವೆ.
ಇದಲ್ಲದೆ, ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆಯೂ ಇದೆ. 5 ವಿದ್ಯುತ್ ಕಂಪನಿಗಳು ವಿದ್ಯುತ್ ದರವನ್ನು ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಿವೆ. 2025-26ರ ಸಾಲಿನಲ್ಲಿ ಪ್ರತಿ ಯೂನಿಟ್‌ಗೆ 67 ಪೈಸೆ, 2026-27ರಲ್ಲಿ 74 ಪೈಸೆ ಮತ್ತು 2027-28ರಲ್ಲಿ 91 ಪೈಸೆ ಹೆಚ್ಚಳಕ್ಕೆ ಅನುಮೋದನೆ ನೀಡುವಂತೆ ಮನವಿ ಮಾಡಿದೆ.