ಬೆಂಗಳೂರು: ಹಸುಗಳ ಕೆಚ್ಚಲು ಕತ್ತರಿಸಿ ಕ್ರೌರ್ಯ, ಓರ್ವನ ಬಂಧನ

Date:

spot_img

ಚಾಮರಾಜಪೇಟೆಯ ಓಲ್ಡ್ ಪೆನ್ಶನ್ ಮೊಹಲ್ಲಾದ ವಿನಾಯಕನಗರದಲ್ಲಿ ಮೂವರು ಹಸುಗಳ ಮೇಲೆ ನಡೆಸಿದ ಕ್ರೌರ್ಯದ ಪ್ರಕರಣಕ್ಕೆ ಸಂಬಂಧಿಸಿ ಕಾಟನ್ ಪೇಟೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ನಿನ್ನೆ ತಡರಾತ್ರಿ ಬಂಧನ ನಡೆದಿದ್ದು, ಸ್ಥಳ ಮಹಜರು ಸೇರಿದಂತೆ ವಿಚಾರಣೆ ಮುಂದುವರಿಯುತ್ತಿದೆ.

ವಿನಾಯಕನಗರದ ನಿವಾಸಿ ಕರ್ಣ ಎಂಬವರ ಮೂರು ಹಸುಗಳ ಕೆಚ್ಚಲನ್ನು ದುಷ್ಕರ್ಮಿಗಳು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಕರ್ಣ ರವರು ನೀಡಿದ ದೂರು ಆಧರಿಸಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎ ಸಿ ಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರ ತಂಡ ತನಿಖೆ ನಡೆಸುತ್ತಿದ್ದು, ಪ್ರಕರಣ ತೀವ್ರ ಗಮನ ಸೆಳೆದಿದೆ.

ಹಸುಗಳಿಗೆ ಚಾಮರಾಜಪೇಟೆ ಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅವುಗಳು ಪ್ರಾಣಾಪಾಯದಿಂದ ಪಾರಾಗಿವೆ. ಆದರೆ, ಗಾಯಗಳು ಮಾಸಲು ಇನ್ನೂ ಎರಡು ವಾರಗಳ ಕಾಲ ಬೇಕಾಗಿದೆ.

ಈ ಘಟನೆಯ ಬಳಿಕ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಹಿಂದೂ ಪರ ಸಂಘಟನೆಗಳ ಮುಖಂಡರು ಹಾಗೂ ವಿಪಕ್ಷ ನಾಯಕ ಆರ್. ಅಶೋಕ್, ಸಂಸದ ಪಿ.ಸಿ. ಮೋಹನ್, ಮತ್ತು ಎಂ ಎಲ್‌ ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಹಸುಗಳ ಮಾಲೀಕರಿಗೆ ಸಾಂತ್ವನ ಹೇಳಿದರು.

ಘಟನೆಯನ್ನು ಖಂಡಿಸಿದ ಆರ್. ಅಶೋಕ್, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು ಮತ್ತು ವೈಯುಕ್ತಿಕವಾಗಿ ₹1 ಲಕ್ಷ ಪರಿಹಾರವನ್ನು ಘೋಷಿಸಿದರು.

ಈ ಪ್ರಕರಣದ ತನಿಖೆ ಸದ್ಯದಲ್ಲೇ ಮುಗಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ