
ಇನ್ನಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಸಭೆಯು ಇನ್ನಾ ಕಾಚೂರು ಪರಾಡಿ ಮನೆ ಸಭಾಂಗಣದಲ್ಲಿ ಗ್ರಾಮೀಣ ಸಮಿತಿ ಅಧ್ಯಕ್ಷ ಜಯ ಎಸ್ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದರಾವ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ಮಹಿಳಾ ಅಧ್ಯಕ್ಷೆ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಯುವ ಕಾಂಗ್ರೆಸ್ ಮುಖಂಡ ಪಂ. ಸದಸ್ಯ ದೀಪಕ್ ಕೋಟ್ಯಾನ್ ಸಂದರ್ಭೋಚಿತ ಮಾತುಗಳನ್ನಾಡಿ ಪಕ್ಷ ಸಂಘಟನೆಗೆ ಮಾರ್ಗದರ್ಶನ ಮಾಡಿದರು.
ನೂತನವಾಗಿ ಆಯ್ಕೆಯಾದ ಗ್ರಾಮೀಣ ಸಮಿತಿ ವಿವಿಧ ಘಟಕಗಳ ಅಧ್ಯಕ್ಷರುಗಳನ್ನು ಪಕ್ಷದ ಶಾಲು ಹಾಕಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಗ್ರಾ. ಪಂ. ಮಾಜಿ ಅಧ್ಯಕ್ಷರುಗಳಾದ ಸುಲೋಚನ ಕೋಟ್ಯಾನ್, ಜಾನ್ ಮೆಂಡೋನ್ಸಾ, ಹಿರಿಯರಾದ ಎಂ. ಪಿ. ಮೊಯಿದಿನಬ್ಬ, ದಿವಾಕರ ಶೆಟ್ಟಿ, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಮಾಜಿ ಅಧ್ಯಕ್ಷ ಕುಶ ಮೂಲ್ಯ ಕಾರ್ಯಕ್ರಮವನ್ನು ಸಂಯೋಜಿಸಿದರು.