ಪಂಚಾಯತ್ ಚುನಾವಣೆ ನಡೆಸಲು ಸರಕಾರದ ಅಸಡ್ಡೆ : ಸಂವಿಧಾನದ ಆಶಯಕ್ಕೆ ಧಕ್ಕೆ. ಸಾಣೂರು ನರಸಿಂಹ ಕಾಮತ್ ಆಕ್ರೋಶ

Date:

spot_img

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಗಳು ಕಳೆದ 5 ವರ್ಷಗಳಿಂದ ಚುನಾವಣೆ ನಡೆಯದೆ ಸ್ತಬ್ಧವಾಗಿದ್ದು, ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗಳು ಕೂಡಾ ಅದೇ ಹಾದಿಯನ್ನು ಹಿಡಿಯುವ ಲಕ್ಷಣಗಳು ತೋರಿ ಬರುತ್ತಿರುವುದು ದುರದೃಷ್ಟಕರ.

ಸರಕಾರ ಇಡೀ ಪಂಚಾಯತ್ ರಾಜ್ ವ್ಯವಸ್ಥೆಯನ್ನೇ ಆಡಳಿತಾಧಿಕಾರಿಗಳ ಮೂಲಕ ನಡೆಸುವ ಹುನ್ನಾರ ಮಾಡಿರುವುದು ಖಂಡನೀಯ.

ರಾಜ್ಯ ಸರಕಾರದ ಬೇಜವಾರಬ್ದಾರಿತನ

ರಾಜ್ಯ ಸರ್ಕಾರವು ಗ್ರಾಮ ಪಂಚಾಯತ್ ಚುನಾವಣೆ ಗಳಿಗೆ ಪೂರಕವಾಗಿ ವಾರ್ಡುವಾರು ಸದಸ್ಯರ ಸಂಖ್ಯೆ ಮತ್ತು ಮೀಸಲು ನಿಗದಿ ಮಾಡದೆ ಇರುವುದರಿಂದ ರಾಜ್ಯ ಚುನಾವಣಾ ಆಯೋಗ ಸರಕಾರದ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿರುವುದು ಸರಕಾರದ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುವಂತಿದೆ.

ದೇಶದ ಸುಪ್ರೀಂ ಕೋರ್ಟ್ ಕೂಡ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಕಾಲದಲ್ಲಿ ನಡೆಸುವುದು ಸಾಂವಿಧಾನಿಕ ಕರ್ತವ್ಯ. ಅದನ್ನು ಮಾಡದಿದ್ದರೆ ಕಾನೂನು ಸುವ್ಯವಸ್ಥೆಯ ಕುಸಿತವೆಂದು ತೀಕ್ಷ್ಣವಾಗಿ ಹೇಳಿದೆ.

ಪ್ರಜಾಪ್ರಭುತ್ವದ ಬೇರುಗಳು ದುರ್ಬಲ

ಸರಕಾರದ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸ್ಥಳೀಯ ಮಟ್ಟದ ನಾಯಕತ್ವ ನಿಷ್ಕ್ರಿಯವಾಗಿ ಕ್ರಮೇಣ ಪ್ರಜಾಪ್ರಭುತ್ವದ ಬೇರುಗಳು ದುರ್ಬಲವಾಗುತ್ತಾ ಹೋಗುತ್ತದೆ.

ಸರಕಾರ ಇದೇ ರೀತಿಯ ಉದ್ದಟತನ ಮತ್ತು ಬೇಜವಾಬ್ದಾರಿತನವನ್ನು ಮುಂದುವರಿಸಿದರೆ ರಾಜ್ಯದ ಲಕ್ಷಾಂತರ ಮಂದಿ ಸ್ಥಳೀಯ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಬೀದಿಗಿಳಿದು ಪ್ರತಿಭಟಿಸುವ ದಿನಗಳು ದೂರವಿಲ್ಲ ಎಂದು ಕರ್ನಾಟಕ ಪಂಚಾಯತ್ ರಾಜ್ ಪರಿಷತ್ (ರಿ.), ಬೆಂಗಳೂರು ಇದರ ಆಡಳಿತ ಮಂಡಳಿ ಸದಸ್ಯರಾದ ಸಾಣೂರು ನರಸಿಂಹ ಕಾಮತ್ ರವರು ಸರಕಾರಕ್ಕೆ ಎಚ್ಚರಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.