ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಕಾಸರಗೋಡಿನ ಖ್ಯಾತ ಯೂಟ್ಯೂಬರ್ “ಸಾಲು ಕಿಂಗ್” ಬಂಧನ

Date:

spot_img

ಕಾಸರಗೋಡು: ಕಾಸರಗೋಡು ಮೂಲದ ಜನಪ್ರಿಯ ಯೂಟ್ಯೂಬರ್ ಒಬ್ಬನನ್ನು ಅಪ್ರಾಪ್ತ ಬಾಲಕಿಗೆ ವಿವಾಹದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೋಝಿಕ್ಕೋಡ್‌ನ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ. ಕೊಡಿಯಮ್ಮೆ ಚೆಪ್ಪಿನಡ್ಕದ ನಿವಾಸಿಯಾಗಿರುವ, “ಸಾಲು ಕಿಂಗ್” ಎಂದೇ ಖ್ಯಾತನಾಗಿರುವ ಮೊಹಮ್ಮದ್ ಸಾಲಿ (35) ಬಂಧಿತ ಆರೋಪಿ. ವಿದೇಶದಿಂದ ಹಿಂದಿರುಗುತ್ತಿದ್ದಾಗ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಇತನನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ಸುಮಾರು 7 ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ “ಸಾಲು ಕಿಂಗ್ ಮೀಡಿಯಾ”, “ಸಾಲು ಕಿಂಗ್ ವ್ಲಾಗ್ಸ್”, “ಸಾಲು ಕಿಂಗ್ ಫ್ಯಾಮಿಲಿ” ಮುಂತಾದ ಹೆಸರುಗಳಲ್ಲಿ ಸಕ್ರಿಯನಾಗಿದ್ದ ಸಾಲು ಕಿಂಗ್, ಇಂಟರ್ನೆಟ್‌ನಲ್ಲಿ ಗಮನಾರ್ಹ ಅಭಿಮಾನಿ ಬಳಗವನ್ನು ಹೊಂದಿದ್ದನು. 2016ರಲ್ಲಿ ವಿವಾಹವಾಗಿದ್ದ ಈತನಿಗೆ 3 ಮಕ್ಕಳಿದ್ದಾರೆ.

ಪತ್ನಿಯೊಂದಿಗಿನ ಸಂಬಂಧದಲ್ಲಿ ಬಿರುಕು ಉಂಟಾದ ಸಮಯದಲ್ಲಿ, ಸಾಲು ಕಿಂಗ್‌ ಇನ್‌ಸ್ಟಾಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಸಾಮಾಜಿಕ ಜಾಲತಾಣಗಳ ಮೂಲಕ 15 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಸಂಪರ್ಕ ಬೆಳೆಸಿದ್ದಾನೆ. ನಂತರ ಆ ಬಾಲಕಿಗೆ ಮದುವೆಯ ಭರವಸೆ ನೀಡಿ ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ, ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಷಯ ತಿಳಿದ ತಕ್ಷಣ ಆರೋಪಿಯು ವಿದೇಶಕ್ಕೆ ಪರಾರಿಯಾಗಿದ್ದನು. ಕೊಯಿಲಾಂಡಿ ಪೊಲೀಸರು ಈತನನ್ನು ಬಂಧಿಸಲು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದರು. ಶನಿವಾರ ಬೆಳಿಗ್ಗೆ ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಕೊಯಿಲಾಂಡಿ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿದ್ದಾರೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.