ಮಣಿಪಾಲ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕಲ್ಯಾಣ ಮತ್ತು ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಜನವರಿ 2 ರಂದು ಕೊಕ್ಕರ್ಣೆಯ ದುರ್ಗಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತನ್ಮಯಿ ಆರ್.ಆರಾಧ್ಯ. ಪದವಿ ಪೂರ್ವ ಕಾಲೇಜು, ಭರತನಾಟ್ಯದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಂದಾಪುರದ ಎಂ.ರಾಜಶೇಖರ್ ಮತ್ತು ಕಲ್ಪನಾ ಆರ್. ದಂಪತಿಯ ಪುತ್ರಿ. ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರು ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಯಶಸ್ವಿ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು.