



ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್, ಲಾಡ್ಜ್, ಹಾಗೂ ರೆಸಾರ್ಟ್ ಮಾಲೀಕರನ್ನು ಠಾಣೆಗೆ ಆಹ್ವಾನಿಸಿ, ಮುಂಬರುವ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳು ಮತ್ತು ಸುರಕ್ಷತಾ ಕ್ರಮಗಳ ಕುರಿತು ನಿರ್ದೇಶನ ನೀಡಲಾಯಿತು.
ನಿರ್ವಾಹಕರು ಹಾಗೂ ಸಿಬ್ಬಂದಿ ಹೊಸ ವರ್ಷ ಸಂಭ್ರಮದಲ್ಲಿಯೂ ಸಾರ್ವಜನಿಕರ ಸುರಕ್ಷತೆ ಹಾಗೂ ಶಿಸ್ತನ್ನು ಕಾಪಾಡುವಂತೆ ಪೊಲೀಸರು ತಿಳಿಸಿದರು. ಅನಧಿಕೃತ ಚಟುವಟಿಕೆಗಳು, ಶಬ್ದ ಮಾಲಿನ್ಯ ನಿಯಂತ್ರಣ, ಮತ್ತು ಮಿತಿಮೀರಿದ ಮದ್ಯ ಸೇವನೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಕ್ತ ಸಲಹೆಗಳನ್ನು ನೀಡಲಾಯಿತು.
ಆಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ಸ್ಥಳೀಯ ಪೊಲೀಸರೊಂದಿಗೆ ಸಮನ್ವಯ ಸಾಧಿಸಲು ಮಾರ್ಗಸೂಚಿಗಳನ್ನು ಪಾಲಿಸಲು ಹೇಳಿದರು.