
ಆಂಧ್ರಪ್ರದೇಶದ ಕಾಕಿನಾಡದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ 35 ವರ್ಷದ ರಮ್ಯ ಸ್ಮೃತಿ ಎಂಬ ಮಹಿಳೆಯೊಬ್ಬರು ಮೊಬೈಲ್ ಫೋನ್ ನುಂಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕುಟುಂಬದವರು ತಿಳಿಸಿದಂತೆ, ರಮ್ಯ ಕಳೆದ 15 ವರ್ಷಗಳಿಂದ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದರು. ಆದರೆ, ಇತ್ತೀಚೆಗೆ ಅವರು ಮೊಬೈಲ್ ಫೋನನ್ನು ನುಂಗಿದ್ದು, ಮನೆಯವರು ಅದಕ್ಕಾಗಿ ಹುಡುಕಾಟ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಮನೆಮಂದಿ ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಮೊಬೈಲ್ ನುಂಗಿದ ಪರಿಣಾಮ ಆಕೆಯ ಅನ್ನನಾಳಕ್ಕೆ ಪೆಟ್ಟು ಬಿದ್ದಿದೆ ಎಂದು ತಿಳಿಸಿದ್ದಾರೆ. ನಂತರ, ಆಕೆಯನ್ನು ಜ. 25 ರಂದು ಕಾಕಿನಾಡದ ಜಿಜಿಎಚ್ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಆಕೆ ಚಿಕಿತ್ಸೆಗಾಗಿ ಸ್ಪಂದಿಸದೆ ಮೃತರಾಗಿದ್ದಾರೆ.
ಮೃತಳ ತಂದೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗಳ ಸಾವಾಗಿರುವುದಾಗಿ ಆರೋಪಿಸಿದ್ದಾರೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.