ಹತ್ತೊಂಭತ್ತು ಕಾಯಿಲೆಗಳಿಗೆ ರಾಮಬಾಣ! ನುಗ್ಗೆ ಸೊಪ್ಪಿನ ಅದ್ಭುತ ಲಾಭಗಳು

Date:

spot_img

ಬೆಂಗಳೂರು: ಆಯುರ್ವೇದದಲ್ಲಿ ನುಗ್ಗೆ ಸೊಪ್ಪನ್ನು ಅತ್ಯುತ್ತಮ ಔಷಧೀಯ ಸಸ್ಯವೆಂದು ಪರಿಗಣಿಸಲಾಗಿದೆ. ಇದರ ಎಲೆಗಳಿಂದ ತಯಾರಿಸಿದ ನೀರನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ದೇಹಕ್ಕೆ ಅನೇಕ ಆರೋಗ್ಯಕರ ಲಾಭಗಳನ್ನು ನೀಡುತ್ತದೆ. ಇದು ಕೂದಲು ಉದುರುವಿಕೆ, ರಕ್ತಹೀನತೆ, ಸಂಧಿವಾತ, ಥೈರಾಯ್ಡ್, ಅಸ್ತಮಾ, ದುರ್ಬಲ ರೋಗನಿರೋಧಕ ಶಕ್ತಿ, ಮಧುಮೇಹ ಹಾಗೂ ತೂಕ ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ.

ನುಗ್ಗೆ ಸೊಪ್ಪಿನಲ್ಲಿ ಶರೀರಕ್ಕೆ ಅಗತ್ಯವಿರುವ ಹಲವಾರು ಪೋಷಕಾಂಶಗಳು ಹೇರಳವಾಗಿ ಅಡಗಿವೆ. ಕ್ಯಾರೆಟ್‌ಗಿಂತ 10 ಪಟ್ಟು ಹೆಚ್ಚು ವಿಟಮಿನ್ A, ಹಾಲಿಗಿಂತ 17 ಪಟ್ಟು ಹೆಚ್ಚು ಕ್ಯಾಲ್ಸಿಯಂ, ಕಿತ್ತಳೆಗಿಂತ ಏಳು ಪಟ್ಟು ಹೆಚ್ಚು ವಿಟಮಿನ್ C, ಬಾಳೆಹಣ್ಣಿಗಿಂತ 15 ಪಟ್ಟು ಹೆಚ್ಚು ಪೊಟ್ಯಾಸಿಯಮ್, 25 ಪಟ್ಟು ಹೆಚ್ಚು ಕಬ್ಬಿಣ ಮತ್ತು ಮೊಸರುಗಿಂತ 9 ಪಟ್ಟು ಹೆಚ್ಚು ಪ್ರೋಟೀನ್ ಇದರಲ್ಲಿ ಅಡಗಿದೆ. ಈ ಕಾರಣಕ್ಕಾಗಿ, ನುಗ್ಗೆ ಸೊಪ್ಪನ್ನು ಶಕ್ತಿ ಹೆಚ್ಚಿಸುವ ಆಹಾರವಾಗಿಯೂ ಪರಿಗಣಿಸಲಾಗುತ್ತದೆ.

ಇದು ತಾಯಂದಿರಲ್ಲಿ ಎದೆ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಲು ಸಹಕಾರಿ. ಸಂಧಿವಾತದಂತಹ ನೋವಿಗೆ ಶ್ರಮಿಸುತ್ತಿರುವವರಿಗೆ ಇದು ಬಹಳ ಪರಿಣಾಮಕಾರಿ ಎಂಬುದು ಅಧ್ಯಯನಗಳಲ್ಲಿ ಕಂಡು ಬಂದಿದೆ. ಇದರಲ್ಲಿರುವ ಪಾಲಿಫಿನಾಲ್ ಮತ್ತು ಫ್ಲೇವನಾಯ್ಡ್‌ಗಳು ಉರಿಯೂತ ನಿವಾರಣೆಗೆ ಸಹಾಯ ಮಾಡುತ್ತವೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಸೊಪ್ಪಿನ ನೀರು, ಅನೇಕ ಸೋಂಕುಗಳಿಂದ ರಕ್ಷಣೆ ನೀಡುವ ಶಕ್ತಿಯನ್ನು ಹೊಂದಿದೆ.

ಮಧುಮೇಹ ನಿಯಂತ್ರಣಕ್ಕೆ ಸಹಾಯಕವಾಗಿರುವ ನುಗ್ಗೆ ಸೊಪ್ಪು, ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿರಿಸುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ, ಮಧುಮೇಹದ ಅಪಾಯ ಕಡಿಮೆಯಾಗುತ್ತದೆ. ಅಲ್ಲದೆ, ಇದು ತೂಕ ಕಡಿಮೆಯಾಗಲು ಸಹಾಯ ಮಾಡುತ್ತದೆ.

ಒಟ್ಟಿನಲ್ಲಿ, ನುಗ್ಗೆ ಸೊಪ್ಪಿನ ನೀರನ್ನು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ದೇಹದ ಒಟ್ಟಾರೆ ಆರೋಗ್ಯವನ್ನು ಉತ್ತೇಜಿಸಿ, ಅನೇಕ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.