
ಕೆ ಎಂ ಈ ಎಸ್ ಶಿಕ್ಷಣ ಸಂಸ್ಥೆಯು ” ಸಮಾಜ ವಿಜ್ಞಾನ, ವಿಜ್ಞಾನ, ಗಣಿತ ಇವುಗಳ ಮಾದರಿಗಳ ವಸ್ತು ಪ್ರದರ್ಶನ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ” ವನ್ನು ಏರ್ಪಡಿಸಲಾಯಿತು. ಈ ಮೂಲಕ “ಮಕ್ಕಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಕಿರಿಯ ವಯಸ್ಸಿನ ಮಕ್ಕಳಲ್ಲಿ ಶಿಕ್ಷಕರು ತುಂಬುವ ಕಾರ್ಯ ಅವರಲ್ಲಿರುವ ಪ್ರತಿಭೆಯನ್ನು ಸಮಾಜಕ್ಕೆ ಪರಿಚಯಿಸುವ ರೀತಿ ಎಲ್ಲವೂ ಅತ್ಯುತ್ತಮವಾಗಿತ್ತು” ಎಂದು ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಶ್ರೀಯುತ ಕೆ ಎಸ್ ಇಮ್ತಿಯಾಜ್ ಅಹಮದ್ ಇವರು ನುಡಿದರು.
ಈ ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಿದ ಸಂಸ್ಥೆಯ ಹಳೆ ವಿದ್ಯಾರ್ಥಿನಿಯಾದ ಅಂಬಿಕ ಇವರು “ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ಬೆಳವಣಿಗೆ ಹೆಚ್ಚುತ್ತಿದ್ದು ಮಕ್ಕಳು ಹಾಗೂ ಪೋಷಕರು ಇಂತಹ ವಸ್ತು ಪ್ರದರ್ಶನಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಸಹಕಾರಿಯಾಗಿದೆ” ಎಂದರು.
ಮತ್ತೋರ್ವ ಅತಿಥಿಯಾದ ನಿಧಿ ಇವರು “ಶಾಲೆಯಲ್ಲಿ ಓದುವ ಮಕ್ಕಳು ಪುಸ್ತಕದ ಹುಳುವಾಗದೆ ಇತರ ವಿಷಯಗಳ ಬಗ್ಗೆ, ಪಠ್ಯೇತರ ಚಟುವಟಿಕೆಗಳ ಬಗ್ಗೆಯೂ ಹೆಚ್ಚಿನ ಆಸಕ್ತಿಯನ್ನು ವಹಿಸಬೇಕು” ಎಂದರು.
ಈ ಸಮಾರಂಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರೀಯುತ ರಾಮಚಂದ್ರ ನೆಲ್ಲಿಕಾರ್, ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಪಾಟ್ಕರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಲೊಲಿಟ.ಡಿ. ಸಿಲ್ವ ಸೇರಿದಂತೆ ಶಾಲಾ ಶಿಕ್ಷಕರು, ಸಿಬ್ಬಂದಿಗಳು,ಪೋಷಕರು ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಹಾಜರಿದ್ದರು.