ಕೆ ಎಂ ಈ ಎಸ್ ಪ್ರತಿಭೋತ್ಸವ ವಿಜೃಂಭನೆ

Date:

spot_img

ಕೆ ಎಂ ಈ ಎಸ್ ಶಿಕ್ಷಣ ಸಂಸ್ಥೆಯು  “ಕೆ ಎಂ ಈ ಎಸ್ ಪ್ರತಿಭೋತ್ಸವದ ” ಅಂಗವಾಗಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ದಿನಾಂಕ 05/02/2025 ರಂದು ಸಂಸ್ಥೆಯ ಅಧ್ಯಕ್ಷರಾದ ಕೆ ಎಸ್ ಇಮ್ತಿಯಾಜ್ ಅಹಮದ್ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇವರು ” ಪಠ್ಯದ ಜೊತೆಗೆ ಮಕ್ಕಳಲ್ಲಿರುವ ವಿವಿಧ ಪ್ರತಿಭೆಗಳನ್ನು ಹೊರ ತರುವ ಉದ್ದೇಶದಿಂದ” ಈ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂಬುದಾಗಿ ತಿಳಿಸಿದರು.

 ಪ್ರಥಮ ದಿನದಂದು 5 ನೇ, 6ನೇ, 7 ನೇ ತರಗತಿಯ ಮಕ್ಕಳಿಂದ FUSION FIESTA ಎಂಬ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಈ ಸಂಭ್ರಮದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕೆ ಎಂ ಈ ಎಸ್ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿನಿಯಾದ ಸ್ಪಂದನ ಇವರು “ಮಕ್ಕಳು ಪಠ್ಯವನ್ನು ಅಭ್ಯಾಸ ಮಾಡುವುದರ ಜೊತೆಗೆ ಹೊರ ಜಗತ್ತಿನಲ್ಲಿ ನಡೆಯುವ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಭಾವವನ್ನು ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ” ಸಲಹೆ ನೀಡಿದರು.
 ಅಂತೆಯೇ ಮತ್ತೋರ್ವ ಹಳೆ ವಿದ್ಯಾರ್ಥಿನಿಯಾದ ತನುಶ್ರೀ  “ನಾನು ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ನನ್ನನ್ನು ತೊಡಗಿಸಿಕೊಂಡಿದ್ದೇನೆ, ಸಾಧನೆ ಮಾಡಿದ್ದೇನೆ ಎಂದರೆ ಅದಕ್ಕೆ ಬೆನ್ನೆಲುಬಾಗಿ ನಿಂತದ್ದು ನನ್ನ ಶಿಕ್ಷಕರು ಮತ್ತು ನನ್ನ ಕೆ ಎಂ ಈ ಎಸ್ ಶಿಕ್ಷಣ ಸಂಸ್ಥೆ ” ಎಂದು ಹೇಳಿದರು.

 ಅಂತೆಯೇ ಈ ಸಮಾರಂಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರೀಯುತ ರಾಮಚಂದ್ರ ನೆಲ್ಲಿಕಾರ್, ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಪಾಟ್ಕರ್, ಪ್ರಾಥಮಿಕ  ವಿಭಾಗದ  ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಲೊಲಿಟ.ಡಿ. ಸಿಲ್ವ ಸೇರಿದಂತೆ ಶಾಲಾ ಶಿಕ್ಷಕರು, ಸಿಬ್ಬಂದಿಗಳು,ಪೋಷಕರು ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಹಾಜರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ