ಸಾಧಾರಣ ತರಕಾರಿಯಲ್ಲ ಇದು! ಆರೋಗ್ಯದ ಖಜಾನೆಯಾದ ಕೆಸುವಿನ ಗಡ್ಡೆಯ ಉಪಯೋಗಗಳು

Date:

spot_img
taro root22

ಕೆಸುವಿನ ಗಡ್ಡೆ ಅಂದರೆ ಸಾಮಾನ್ಯವಾಗಿ ಅಡುಗೆ ಮನೆಯ ಸರಾಸರಿ ತರಕಾರಿ ಎಂದು ಭಾವಿಸುವವರು ಹೆಚ್ಚು. ಆದರೆ ಪುಟ್ಟದಾಗಿದ್ದರೂ ಇದರಲ್ಲಿರುವ ಪೋಷಕಾಂಶಗಳು ಆರೋಗ್ಯಕ್ಕೆ ನೀಡುವ ಲಾಭ ಅಪಾರ. ದಿನನಿತ್ಯದ ಆಹಾರದಲ್ಲಿ ಈ ಗಡ್ಡೆಯನ್ನು ಸೇರಿಸಿಕೊಂಡರೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.

ಮಧುಮೇಹ ನಿಯಂತ್ರಣಕ್ಕೆ ಸಹಾಯ:
ಕೆಸುವಿನ ಗಡ್ಡೆಯಲ್ಲಿರುವ ಫೈಬರ್ ಆಹಾರದ ಜೀರ್ಣಕ್ರಿಯೆಯನ್ನು ನಿಧಾನಗೊಳಿಸಿ, ಗ್ಲೂಕೋಸ್‌ ಹೀರಿಕೊಳ್ಳುವಿಕೆಯನ್ನು ತಗ್ಗಿಸುತ್ತದೆ. ಇದರ ಪರಿಣಾಮವಾಗಿ ಇನ್ಸುಲಿನ್ ನಿಯಂತ್ರಿತವಾಗಿ ಬಿಡುಗಡೆ ಆಗಿ, ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ. ಹೀಗಾಗಿ ಮಧುಮೇಹಿಗಳು ಇದನ್ನು ನಿಗದಿತವಾಗಿ ಸೇವನೆ ಮಾಡಬಹುದು.

ಹೃದಯ ಆರೋಗ್ಯಕ್ಕೆ ಲಾಭ:
ಇದರಲ್ಲಿರುವ ಪೊಟ್ಯಾಸಿಯಮ್ ದೇಹದಲ್ಲಿ ಸೋಡಿಯಂ ಪ್ರಮಾಣವನ್ನು ಸಮತೋಲನದಲ್ಲಿಟ್ಟುಕೊಳ್ಳುತ್ತವೆ. ಇದರ ಪರಿಣಾಮವಾಗಿ ರಕ್ತದೊತ್ತಡ ನಿಯಂತ್ರಣವಾಗುತ್ತದೆ ಮತ್ತು ಹೃದಯದ ಕಾರ್ಯ ಚಟುವಟಿಕೆ ಉತ್ತಮವಾಗಿರುತ್ತದೆ.

ಕ್ಯಾನ್ಸರ್ ತಡೆಗೆ ಸಹಾಯಕ:
ಆಂಟಿ ಆಕ್ಸಿಡೆಂಟ್ ಅಂಶಗಳಿಂದ ಕೂಡಿರುವ ಕೆಸುವಿನ ಗಡ್ಡೆ ಕ್ಯಾನ್ಸರ್ ಕಾರಕ ಜೀವಕೋಶಗಳ ಬೆಳವಣಿಗೆಯನ್ನು ತಡೆಗಟ್ಟುತ್ತದೆ. ಇದು ವಿಶೇಷವಾಗಿ ಬಾಯಿ ಮತ್ತು ಶ್ವಾಸಕೋಶ ಕ್ಯಾನ್ಸರ್‌ಗಳನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ.

ಜೀರ್ಣಕ್ರಿಯೆ ಮತ್ತು ಹೊಟ್ಟೆ ಸಮಸ್ಯೆಗಳಿಗೆ ಪರಿಹಾರ:
ಮಲಬದ್ಧತೆ, ಗ್ಯಾಸ್ಟ್ರಿಕ್, ಆಸಿಡಿಟಿ, ಮೂಲವ್ಯಾಧಿ ಮುಂತಾದ ಹೊಟ್ಟೆ ಸಂಬಂಧಿತ ಸಮಸ್ಯೆಗಳನ್ನು ತೊಡೆದು ಹಾಕಲು ಸಹಾಯಕವಾಗುತ್ತದೆ.

ಹೆಚ್ಚಿನ ಲಾಭ ಪಡೆಯಲು ಹೇಗೆ ಸೇವನೆ ಮಾಡಬೇಕು?
ಕೆಸುವಿನ ಗಡ್ಡೆಯನ್ನು ಚೆನ್ನಾಗಿ ತೊಳೆದು ಬೇಯಿಸಿ ಪಲ್ಯವಾಗಿ ಸೇವಿಸಬಹುದು. ಹಾಗೆಯೇ ರೋಸ್ಟ್ ಮಾಡಿ ಮಸಾಲೆ ಸೇರಿಸಿ ತಿಂದರೂ ಉತ್ತಮ. ನಿತ್ಯ ಆಹಾರದಲ್ಲಿ ಚಿಕ್ಕ ಪ್ರಮಾಣದಲ್ಲಿ ಬಳಸಿದರೂ ಆರೋಗ್ಯದಲ್ಲಿ ಉತ್ತಮ ಫಲಿತಾಂಶವನ್ನು ಕಾಣಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ